RRB Recruitment 2025: 10ನೇ ಪಾಸಾದವರಿಗೆ ಬೃಹತ್ ನೇಮಕಾತಿ.! 9,900 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವಂತಹ ಪ್ರಮುಖವಾದ ವಿಷಯವೇನೆಂದರೆ ಇದೀಗ ರೈಲ್ವೆ ಇಲಾಖೆಗೆ ಹೊರಡಿಸಿರುವಂತಹ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದಂತೆ ಈ ಕೆಳಗಡೆ ಮಾಹಿತಿಯನ್ನು ನೀಡಲಾಗಿರುತ್ತದೆ. ಆದ ಕಾರಣ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿರಿ.
Table of Contents
Also Read: ಜಿಯೋ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ರಿಚಾರ್ಜ್ ಪ್ಲಾನ್ ಬಿಡುಗಡೆ.! ಇಲ್ಲಿದೆ ನೋಡಿ ಮಾಹಿತಿ.!
ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀವು ದಿನ ದಿನ ಕೂಡ ಪಡೆಯಬೇಕಾದರೆ ಈ ಕೂಡಲೇ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಈಗಲೇ ಜಾಯಿನ್ ಆಗಿರಿ. ನಿಮಗೆ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗುವಂತಹ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿರುವಂತಹ ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರವನ್ನು ನೀವು ನಮ್ಮ ಜಾಲತಾಣದಲ್ಲಿ ಕಾಣಬಹುದಾಗಿದೆ.
ರೈಲ್ವೆ ಇಲಾಖೆಯ ಹೊಸ ನೇಮಕಾತಿ: (RRB Recruitment 2025)
ಭಾರತೀಯ ರೈಲ್ವೆ ಇಲಾಖೆಯು ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹಲವಾರು ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನೇಮಕಾತಿಗಳಿಗಾಗಿ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಮತ್ತು ಇದರ ಬಗ್ಗೆ ಅಧಿಸೂಚನೆಯನ್ನು ಕೂಡ ಬಿಡುಗಡೆ ಮಾಡಲಾಗಿರುತ್ತದೆ ಸರಿ ಸುಮಾರು 9,900 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಯು ಆರಂಭವಾಗಿದ್ದು ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ನೇಮಕಾತಿ ವಿವರ: (RRB Recruitment 2025)
ರೈಲ್ವೆ ಇಲಾಖೆಯಲ್ಲಿ ಅಂದರೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿರುವಂತಹ ಅಧಿಸೂಚನೆಯ ಪ್ರಕಾರ ಸುಮಾರು 9,900 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ವಿಧಾನವು ಆನ್ಲೈನ್ ಮೂಲಕ ಆಗಿರುತ್ತದೆ ಮತ್ತು ಭಾರತದ ಅತ್ಯಂತ ಉದ್ಯೋಗ ಸ್ಥಳವನ್ನು ನಿಗದಿಪಡಿಸಲಾಗಿರುತ್ತದೆ ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕವನ್ನು ಘೋಷಿಸಲಾಗುವುದು ಎಂಬ ಮಾಹಿತಿಯು ತಿಳಿದು ಬಂದಿದೆ.
Also Read: ರೇಷನ್ ಕಾರ್ಡ್ ಇರುವವರಿಗೆ ಸರ್ಕಾರದಿಂದ ಬಂಪರ್ ಆಫರ್.! ಇಲ್ಲಿದೆ ನೋಡಿ ಮಾಹಿತಿ.!
ಶೈಕ್ಷಣಿಕ ಅರ್ಹತೆಗಳು:
ನೀವು ಈ ಭಾರತೀಯ ರೈಲ್ವೆ ಹುದ್ದೆಯು ಪಡೆಯಬೇಕೆಂದು ಅರ್ಜಿ ಸಲ್ಲಿಸಿದರೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಐಟಿಐ ಹಾಗೂ ಡಿಪ್ಲೋಮಾ ಮುಗಿಸಿರಬೇಕು ಎಂಬ ಮಾಹಿತಿಯನ್ನು ತಿಳಿಸಿದೆ ಇದು ಶೈಕ್ಷಣಿಕ ಅರ್ಹತೆ ಆಗಿರುತ್ತದೆ.
ವಯೋಮಿತಿ ವಿವರಗಳು:
ಭಾರತೀಯ ರೈಲ್ವೆ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 18 ವರ್ಷ ಮೇಲ್ಪಟ್ಟು ಗರಿಷ್ಠ ಅಂದರೆ 30 ವರ್ಷವನ್ನು ಮೀರಿರಬಾರದು ಎಂಬ ಯುವ ಮಿತಿಯನ್ನು ನಿಗದಿಪಡಿಸಿರುತ್ತಾರೆ. ವರ್ಗಗಳ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಯನ್ನು ಕೂಡ ನೀಡಲಾಗಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ನೀಡಬೇಕಾಗುತ್ತದೆ ಎಂಬ ಮಾಹಿತಿಯು ಇನ್ನೂ ಕೂಡ ಪ್ರಕಟಣೆಯಾಗಿಲ್ಲ ಅಧಿಕೃತ ಅಧಿಸೂಚನೆಯಲ್ಲಿ ನೀವು ಈ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿ ನಂತರ ದಾಖಲೆ ಅತಿ ಪರೀಕ್ಷೆಯನ್ನು ಮಾಡಿ ಮೆಡಿಕಲ್ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಹುದ್ದೆಗಳಿಗೆ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ.? (RRB Recruitment 2025)
ನೀವೇನಾದರೂ ಈ ರೈಲ್ವೆ ಇಲಾಖೆಗೆ ಹೊರಡಿಸಿರುವಂತಹ ಆದಿಶೋಧನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಏಪ್ರಿಲ್ 10ನೇ ತಾರೀಖಿನ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಬಹುದು ಎಂಬ ಮಾಹಿತಿಯು ತಿಳಿದು ಬಂದಿದ್ದು ಪ್ರಸ್ತುತ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಹೆಚ್ಚಿನ ವಿವರಗಳನ್ನು ಪಡೆಯಲು ಈ ಕೆಳಗೆ ನೀಡಿರುವಂತಹ ರೈಲು ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಮೇಲೆ ನೀಡಿರುವಂತಹ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ರೈಲ್ವೆ ಇಲಾಖೆಗೆ ಹೊರಡಿಸಿರುವಂತಹ ಅಧಿಸೂಚನೆಯನ್ನು ವೀಕ್ಷಿಸಬಹುದಾಗಿದೆ ಹೆಚ್ಚಿನ ವಿವರಗಳನ್ನು ನೀವು ಮೇಲೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಪಡೆಯಬಹುದಾಗಿದೆ.